ಮೈಸೂರು: ಪರಿಷ್ಕೃತ ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ತೆಗೆದಿರುವುದು ಅತ್ಯಂತ ಖಂಡನೀಯ. ಇಂತಹ ವಿಚಾರಗಳನ್ನು ನಾವು ಸಹಿಸುವುದಿಲ್ಲ ಹಾಗೂ ಖಂಡಿತ ರಾಜಿಯಾಗುವ ಪ್ರಶ್ನೆಯೂ ಇಲ್ಲ ಎಂದು ಬಿಜೆಪಿ ಶಾಸಕ ಬಿ. ಹರ್ಷವರ್ಧನ್ ಸ್ವಪಕ್ಷದ ವಿರುದ್ಧವೇ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಾನು ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೂನ್ 8 ರಂದು ಮೈಸೂರಿಗೆ ಬರುತ್ತಿದ್ದಾರೆ. ಅಂದು ರಾಜಕೀಯ ಮುತ್ಸದ್ದಿ, ಹಿರಿಯ ಸಂಸತ್ ಸದಸ್ಯರಾದ ವಿ.ಶ್ರೀನಿವಾಸ ಪ್ರಸಾದ್ ಅವರೊಂದಿಗೆ ಭೇಟಿ ಮಾಡಿ, ಹಳೆಯ ಪಠ್ಯವನ್ನೇ ಮುಂದುವರೆಸುವಂತೆ ಒತ್ತಾಯಿಸುತ್ತೇವೆ ಎಂದರು.
ಜೊತೆಗೆ ನೂತನ ಪಠ್ಯ ಪರಿಷ್ಕರಣೆ ಮಾಡಿ ‘ಸಂವಿಧಾನ ಶಿಲ್ಪಿ’ ಎಂಬ ಪದ ತೆಗೆದಿರುವವರ ವಿರುದ್ಧ ಕ್ರಮ ಜರುಗಿಸುವಂತೆಯೂ ಹರ್ಷವರ್ಧನ್ ಒತ್ತಾಯಿಸಿದರು.