ನಳಿನ್ ಕುಮಾರ್ ರನ್ನು ಟೀಕಿಸಿದ ಪೋಸ್ಟ್ ಕಾರ್ಡ್ ಮಹೇಶ್ | ಅತೃಪ್ತ ಆತ್ಮಗಳಿಂದ ಬಿರುಕು ಸೃಷ್ಟಿಸುವ ಹುನ್ನಾರ ಎಂದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ !

Prasthutha|

► ರಾಜ್ಯಾಧ್ಯಕ್ಷ ಹುದ್ದೆ ನೀವು ಕೊಟ್ಟ ಭಿಕ್ಷೆ ಅಲ್ಲ, ಸಂಘಟನಾ ಚಾತುರ್ಯವನ್ನು ಮೆಚ್ಚಿ ಪಕ್ಷ ಕೊಟ್ಟ ಹುದ್ದೆ

- Advertisement -

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ನಡುವಿನ ಮುಸುಕಿನ ಗುದ್ದಾಟ ಮತ್ತಷ್ಟು ಹೆಚ್ಚಾಗುತ್ತಿದ್ದಂತೆ, ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ತೀವ್ರ ಆಕ್ಷೇಪ ಹೊರಹಾಕಿದ್ದಾರೆ. ಇತ್ತೀಚೆಗೆ ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಭಿನ್ನಕೋಮಿನ ಜೋಡಿಯನ್ನು ಹಿಡಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿ ಹಲ್ಲೆಗೆ ಮುಂದಾಗಿದ್ದರು. ಈ ಸಂಬಂಧ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆ ಮತ್ತು ಬಿಜೆಪಿ ಕಾರ್ಯಕರ್ತರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕರಾವಳಿಯ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಂಡಾಮಂಡಲರಾಗಿದ್ದರು.

ರಾಜ್ಯಾಧ್ಯಕ್ಷ ನಳಿನ್ ರನ್ನು ಟೀಕಿಸಿದ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಸುದರ್ಶನ್ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಶಾಸಕರ ವಿರುದ್ಧ ಬರೆದರವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪರೋಕ್ಷವಾಗಿ ಪೋಸ್ಟ್‌ಕಾರ್ಡ್ ಮಾಲೀಕ ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ವಾಗ್ದಾಳಿ ನಡೆಸಿದ ಸುದರ್ಶನ್, ಸಾಮಾಜಿಕ ಜಾಲತಾಣದಲ್ಲಿ ಕೆಲವು ಅತೃಪ್ತ ಆತ್ಮಗಳು ಕೆಲಸ ಮಾಡುತ್ತಿವೆ. ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಬಿರುಕು ಉಂಟು ಮಾಡುವ ಹುನ್ನಾರ ಇದು,” ಎಂದು ಹೇಳಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ರಾಜ್ಯಾಧ್ಯಕ್ಷರ ವಿರುದ್ಧ ಬರೆಯಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ನಳಿನ್ ರನ್ನು ದುರ್ಬಲರು ಅಂತಾ ಬರೆಯಲಾಗಿದೆ. ರಾಜ್ಯಾಧ್ಯಕ್ಷರು ದುರ್ಬಲರು ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಕೇಳಿದ್ದಾರೆ. ರಾಜ್ಯಾಧ್ಯಕ್ಷ ಹುದ್ದೆ ನೀವು ಕೊಟ್ಟ ಭಿಕ್ಷೆ ಅಲ್ಲ, ಸಂಘಟನಾ ಚಾತುರ್ಯವನ್ನು ಮೆಚ್ಚಿ ಪಕ್ಷ ಹುದ್ದೆಯನ್ನು ಕೊಟ್ಟಿದೆ ಎಂದು ಕಾರ್ಯಕರ್ತರ ವಿರುದ್ಧವೇ ಸುದರ್ಶನ್ ವಾಗ್ದಾಳಿ ನಡೆಸಿದ್ದಾರೆ.

- Advertisement -

ಕಾಣದ ಕೈಗಳು “ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಕಳೆದ ಅವಧಿಯಲ್ಲಿ ಈಗ ಟೀಕೆ ಮಾಡಿದವರೇ ಈಗಲೂ ತೆಗಳಿ ಬರೆಯುತ್ತಿದ್ದಾರೆ. ಈ ಮೂಲಕ ಇವರು ಸಾಮಾಜಿಕ ಜಾಲತಾಣದ ಮೂಲಕ ಶಾಸಕ, ಸಂಸದರಾಗುವ ಕನಸನ್ನು ಕಾಣುತ್ತಿದ್ದಾರೆ. ಕೇವಲ ಸಾಮಾಜಿಕ ಜಾಲತಾಣದ ಮೂಲಕ ಸಂಘಟನೆಯನ್ನು, ಪಕ್ಷವನ್ನೋ ಕಟ್ಟಲು ಸಾಧ್ಯವಿಲ್ಲ. ನೈಜ ಕಾರ್ಯಕರ್ತರು ಈ ರೀತಿ ಬರೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News



Join Whatsapp