ಮಂಗಳೂರು: ರಾಜ್ಯದ ಹಲವೆಡೆ ಚಳಿಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಭಾಗದಲ್ಲಿ ಎರಡು ದಿನದಿಂದ ಚಳಿಯ ಪ್ರಮಾಣ ಹೆಚ್ಚಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಗರಿಷ್ಠ ಉಷ್ಣಾಂಶದಲ್ಲಿ ಏರಿಳಿತ ಕಂಡು ಬಂದಿದ್ದು, ಚಳಿಯ ಅನುಭವ ಹೆಚ್ಚಿದೆ.