ಬಾಗಲಕೋಟೆ: ಕೇಸರಿ ಶಾಲು ಧರಿಸಿಕೊಂಡು ಬಂದ ABVPಯ ಕಾರ್ಯಕರ್ತರು ಕಾಲೇಜಿಗೆ ಮತ್ತು ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬಾಗಲಕೋಟೆಯಲ್ಲಿ ಮಂಗಳವಾರ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಹಾಕುವ ಕುರಿತು ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ವಿವಾದ ಉಂಟಾಗಿದ್ದು, ಈ ನಡುವೆ ಎಬಿವಿಪಿ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದ್ದಾರೆ.
ಕಾಲೇಜಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.