ಕಾರ್ಕಳ : ಅರ್ಭಿ ಫಾಲ್ಸ್ ನಲ್ಲಿ ಕಾಲೇಜು ವಿದ್ಯಾರ್ಥಿನಿ ನೀರುಪಾಲು

Prasthutha|

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿರುವ ಅರ್ಭಿ ಫಾಲ್ಸ್ ಗೆ ಈಜಲು ಹೋದ ವಿದ್ಯಾರ್ಥಿನಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪಿದ ಘಟನೆ ನಡೆದಿದೆ. ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿನಿಯನ್ನು ವರ್ಷಿತಾ ಎಂದು ಗುರುತಿಸಲಾಗಿದೆ.

- Advertisement -

ಕಾರ್ಕಳದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಯೊಟೆಕ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಂಗಳೂರು ಮೂಲದ ವರ್ಷಿತಾ ಇಬ್ಬರು ವಿದ್ಯಾರ್ಥಿಗಳೊಂದಿಗೆ ನಿಷೇಧಿತ ಪ್ರದೇಶವಾದ ಪಾಲ್ಸ್ ಗೆ ತೆರಳಿದ್ದು, ಈಜಲೆಂದು ನೀರಿಗೆ ಇಳಿದಿದ್ದಳು.

ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ವರ್ಷಿತಾಳ ಮೃತದೇಹವನ್ನು ಅಗ್ನಿಶಾಮಕ ದಳದ ಸಹಾಯದಿಂದ ಮೇಲಕ್ಕೆ ತರಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp