ಕಾಲೇಜು ವಿದ್ಯಾರ್ಥಿಯ ಬರ್ಬರ ಹತ್ಯೆ

Prasthutha|

ಕಲಬುರ್ಗಿ: ಕಾಲೇಜು ವಿದ್ಯಾರ್ಥಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

- Advertisement -

ಮುಹಮ್ಮದ್ ಮುದ್ದಸೀರ್(19) ಕೊಲೆಯಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ಅಮಿರ್ ಗುಲಶನ್ ಹಾಲ್ ಬಳಿ ಆರೋಪಿಗಳು ಮುದ್ದಸೀರ್ ಮೇಲೆ ತಲವಾರ್ ನಿಂದ ದಾಳಿ ನಡೆಸಿ ಪರಾರಿಯಾಗಿದ್ದರು.

- Advertisement -

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುದ್ದಸೀರ್ ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಮೃತಪಟ್ಟಿದ್ದಾನೆ.

ಈ ಬಗ್ಗೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp