ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಅತೀವ ರಕ್ತಸ್ರಾವದಿಂದ ಸಾವನ್ನಪ್ಪಿದ ಯುವತಿ

Prasthutha|

ಲಕ್ನೋ: ಅತ್ಯಾಚಾರಕ್ಕೊಳಗಾದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅತೀವ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ.

- Advertisement -


ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ರಾಜ್ ಗೌತಮ್(25) ಎಂಬಾತನನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದ್ದು, ಆಕೆಯ ಖಾಸಗಿ ಭಾಗಗಳಲ್ಲಿ ಉಂಟಾದ ಗಂಭೀರ ಗಾಯದಿಂದಾಗಿ ಅತಿಯಾದ ರಕ್ತಸ್ರಾವವು ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಮನೆಯಲ್ಲಿ ಯುವತಿ ಒಬ್ಬಳೇ ಇದ್ದುದನ್ನು ಗಮನಿಸಿದ ರಾಜ್ ಗೌತಮ್ ಎಂಬಾತ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯು ತಾನು ದೌರ್ಜನ್ಯವೆಸಗುವ ಮುನ್ನ ಕಾರ್ಯ ಕ್ಷಮತೆ ಹೆಚ್ಚಿಸುವ ಮಾತ್ರೆ ಸೇವಿಸಿದ್ದು, ಸಂತ್ರಸ್ತೆಯ ವಿರೋಧದ ನಡುವೆಯೂ ಆಕೆ ಮೂರ್ಛೆ ಹೋಗಿ ಆಕೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುವವರೆಗೂ ಅತ್ಯಾಚಾರವೆಸಗಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ.

- Advertisement -


ಯುವತಿಗೆ ರಕ್ತಸ್ರಾವವಾಗಿದ್ದನ್ನು ಕಂಡು ಗಾಬರಿಗೊಂಡ ಆರೋಪಿ ಗೌತಮ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಘಟನೆಯ ಬಳಿಕ ಯುವತಿ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಮನೆಯವರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ದೃಢ ಪಡಿಸಿದ್ದಾರೆ.

Join Whatsapp