ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ; ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

Prasthutha|

ರಾಯಚೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ.

- Advertisement -

ಮೃತ ವಿದ್ಯಾರ್ಥಿನಿಯನ್ನು ಐಶ್ವರ್ಯ(17) ಎಂದು ಗುರುತಿಸಲಾಗಿದೆ. ಐಶ್ವರ್ಯ ಆತ್ಮಹತ್ಯೆಗೆ ಪ್ರಾಂಶುಪಾಲರೇ ಕಾರಣ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪ ಮಾಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಈ ಕುರಿತು ಲಿಂಗಸೂಗೂರು ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp