ಕಾಲೇಜುಗಳ ತರಗತಿ ಪುನಾರಂಭ ಕುರಿತು ಜುಲೈ 19ರಂದು ಸಭೆ

Prasthutha|

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿರುವ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿನ ಭೌತಿಕ ತರಗತಿಗಳನ್ನು ಪುನರಾರಂಭಿಸುವ ಕುರಿತು ಜುಲೈ 19 ರಂದು ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

- Advertisement -


ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕರ ವರ್ಗಾವಣೆ ಕಾರ್ಯ ಆರಂಭವಾಗಿದ್ದು, ನಾಳೆ ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದೆ. ಇದೇ 27ರಿಂದ ಮೂರು ದಿನಗಳ ಕಾಲ ಕೌನ್ಸಲಿಂಗ್ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Join Whatsapp