ನಾಳೆಯಿಂದ ಕಾಲೇಜು ಆರಂಭ

Prasthutha|

ಬೆಂಗಳೂರು: ಪದವಿ, ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳು ನ.17ರಿಂದ ಆರಂಭಗೊಳ್ಳಲಿದೆ. ಅಂತಿಮ ವರ್ಷದ ಪದವಿ ಮತ್ತು ಸ್ನಾತ್ತಕೋತ್ತರ ಪದವಿ ವಿದ್ಯರ್ಥಿಗಳಿಗೆ ಮಾತ್ರ ನೇರ ತರಗತಿಗಳು ನಡೆಯಲಿದ್ದು, ಉಳಿದ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತದೆ.

ನೇರ ತರಗತಿಗಾಗಿ ಕಾಲೇಜಿಗೆ ಬರುವ ವಿಧ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರವನ್ನೂ ನೀಡಬೇಕಾಗುತ್ತದೆ. ಬೋಧಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಮೂರು ದಿನ ಮುಂಚೆ ಕೋವಿಡ್ ಪರೀಕ್ಷೆಗೊಳಗಾಗಿದ್ದು, ನೆಗಟೀವ್ ವರದಿ ಬಂದಿರಬೇಕು ಎಂದು ಸರಕಾರ ಸಂಬಧಿಸಿದ ಪ್ರಾಚಾರ್ಯರಿಗೆ ಸೂಚನೆ ನೀಡಿದೆ.

- Advertisement -

ಕಾಲೇಜಿನ ಕಟ್ಟಡ, ಶೌಚಾಲಯ, ಎಲ್ಲಾ ಕೊಠಡಿಗಳಲ್ಲಿರು ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಬೇಕೆಂದು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಕಾಲೇಜುಗಳನ್ನು ಪುನರಾರಂಭಿಸಲು ಉನ್ನತ ಶಿಕ್ಷಣ ಇಲಾಖೆ ಸಿದ್ಧತೆಗಳನ್ನು ನಡೆಸಿದೆ.

- Advertisement -