ಐವರು ಹೈಕೋರ್ಟ್ ನ್ಯಾಯಾಧೀಶರ ಪದೋನ್ನತಿಗಾಗಿ ಕೊಲಿಜಿಯಂ ಶಿಫಾರಸು

Prasthutha|

ನವದೆಹಲಿ: ಮೂವರು ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್’ಗಳ ಇಬ್ಬರು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್’ಗೆ ಪದೋನ್ನತಿಗೊಳಿಸಲು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ.

- Advertisement -

ಸಿಜೆಐ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಎಸ್.ಎ. ನಝೀರ್, ಕೆ.ಎಂ. ಜೋಸೆಫ್, ಎಂ.ಆರ್. ಶಾ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಕೊಲಿಜಿಯಂ ಮಂಗಳವಾರ ನಡೆದ ಸಭೆಯಲ್ಲಿ ಈ ಶಿಫಾರಸು ಮಾಡಿದೆ.

ರಾಜಸ್ಥಾನ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಾಲ್, ಪಾಟ್ನಾ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್’ನ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್’ನ ನ್ಯಾಯಮೂರ್ತಿ ಮನೋಜ್ ಮಿಶ್ರಾ  ಅವರನ್ನು ಸುಪ್ರೀಂ ಕೋರ್ಟ್’ನ ಪದೋನ್ನತಿಗೆ ಶಿಫಾರಸು ಮಾಡಲಾಗಿದೆ.

Join Whatsapp