ಅ.25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ: ಸಚಿವ ಬಿ.ಸಿ.ನಾಗೇಶ್

Prasthutha|

ಬೆಂಗಳೂರು: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಪುನಾರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.

- Advertisement -


1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.


ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು. ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದು ಅವರು ತಿಳಿಸಿದರು.



Join Whatsapp