ನವದೆಹಲಿ: ಡಿಸೆಂಬರ್ ತಿಂಗಳಾದಿಯಲ್ಲೇ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಿಂದ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು 103.50ಕ್ಕೆ ಹೆಚ್ಚಿಸಿದೆ.
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 103.50 ರೂ.ವರೆಗೆ ಹೆಚ್ಚಿಸಿ ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆದೇಶ ಹೊರಡಿಸಿದೆ.
19 ಕೆಜಿಯ ಪ್ರತಿ ಸಿಲಿಂಡರ್ ಗೆ ದೆಹಲಿಯಲ್ಲಿ ಇಂದಿನಿಂದ 100.50 ರೂ ಹೆಚ್ಚಳವಾಗಿದೆ. ಈ ಮೂಲಕ ಇಲ್ಲಿ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2101 ರೂ.ಗೆ ಏರಿಕೆ ಕಂಡಿದೆ.