ವಾಣಿಜ್ಯ ಗ್ಯಾಸ್‌ ಸಿಲಿಂಡರ್ ದರ ದಿಢೀರ್‌ ಹೆಚ್ಚಳ

Prasthutha|


ನವದೆಹಲಿ: ಒಂದು ತಿಂಗಳ ಹಿಂದೆ, ಸರ್ಕಾರವು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು 200 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಆದರೆ ಈಗ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ದರವನ್ನು ದಿಢೀರ್‌ 209 ರೂಪಾಯಿನಷ್ಟು ಏರಿಕೆ ಮಾಡಿದ್ದು, ಇದರಿಂದ ಈಗಾಗಲೇ ದಿನಸಿ ಧಾನ್ಯಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೀಡಾಗಿರುವ ಹೊಟೇಲ್ ಹಾಗೂ ಇತರ ಆಹಾರೋದ್ಯಮ ನಡೆಸುತ್ತಿರುವವರಿಗೆ ಮತ್ತಷ್ಟು ಸಂಕಷ್ಟ ಆಗಲಿದೆ.

- Advertisement -

ಅಕ್ಟೋಬರ್ 1 ರಿಂದ ಅಂದರೆ ಇಂದಿನಿಂದ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ದರಗಳು ಸ್ಥಿರವಾಗಿರುತ್ತವೆ. ಪ್ರಮುಖ ನಗರಗಳಲ್ಲಿ 14.20 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ದರಗಳನ್ನು ನೋಡುವುದಾದರೆ, ನವದೆಹಲಿಯಲ್ಲಿ 903 ರೂಪಾಯಿ, ಕೋಲ್ಕತ್ತಾದಲ್ಲಿ 929 ರೂಪಾಯಿ, ಮುಂಬೈನಲ್ಲಿ 902.50 ರೂಪಾಯಿ ಮತ್ತು ಚೆನ್ನೈನಲ್ಲಿ 918.50 ರೂಪಾಯಿ ಆಗಿದೆ.

Join Whatsapp