ಕಮಿಷನ್ ಆರೋಪ: ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಕಮಿಷನ್ ಗೆ ಬೇಡಿಕೆ ಇಡುತ್ತಿರುವ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರ ಬಳಿ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊದಲಿಗೆ ಕೆಂಪಣ್ಣನವರ ಸಂಘ ನಮ್ಮ ಬಳಿ ಬಂದಿಲ್ಲ. ಕೆಲವು ಗುತ್ತಿಗೆದಾರರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ ಅಷ್ಟೇ. ಅವರ ಆರೋಪದಲ್ಲಿ ಹುರುಳಿಲ್ಲ. ಈ ಹಿಂದೆ ಆರೋಪ ಮಾಡಿದ ಎಲ್ಲದಕ್ಕೂ ಸರ್ಕಾರ ಕ್ರಮ ಜರುಗಿಸಿದೆ ಎಂದರು. ಏನೇ ದೂರುಗಳಿದ್ದರೂ ಲೋಕಾಯುಕ್ತಕ್ಕೆ ನೀಡಲಿ, ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.



Join Whatsapp