ಬಿಜೆಪಿ ಹಂಚಿಕೊಂಡಿದ್ದ ‘ಮುಸ್ಲಿಂ ಅವಹೇಳನದ ಅನಿಮೇಟೆಡ್ ವೀಡಿಯೊ’ ಡಿಲೀಟ್ ಮಾಡಲು Xಗೆ ಸೂಚಿಸಿದ ಆಯೋಗ

Prasthutha|

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಹಂಚಿಕೊಂಡಿರುವ ಆಕ್ಷೇಪಾರ್ಹ, ಮುಸ್ಲಿಂ ಸಮುದಾಯದ ಅವಹೇಳನಕಾರಿ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸಾಮಾಜಿಕ ಮಾಧ್ಯಮ ವೇದಿಕೆ ‘X’ಗೆ ಸೂಚಿಸಿದೆ.ಈ ಅನಿಮೇಟೆಡ್‌ ವಿಡಿಯೊ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ.

- Advertisement -

ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ಆಕ್ಷೇಪಾರ್ಹ ಪೋಸ್ಟ್ ಅನ್ನು ತೆಗೆದುಹಾಕಲು ಮೇ 5 ರಂದೇ ‘ಎಕ್ಸ್’ ಗೆ ಪತ್ರವನ್ನೂ ಬರೆಯಲಾಗಿದೆ ಎಂದು ಆಯೋಗ ತಿಳಿಸಿದೆ. ಆದರೂ ಬಿಜೆಪಿ ಪೋಸ್ಟ್ ತೆಗದುಹಾಕಿರಲಿಲ್ಲ. ಆ ಕಾರಣ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿರಿಸಿದ್ದಾರೆ. ಮರಿಯಾದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ…’ ಎಂಬ ಹೇಳಿಕೆಯಳ್ಳ ವಿಡಿಯೊವನ್ನು ಕರ್ನಾಟಕ ಬಿಜೆಪಿಯ ‘ಎಕ್ಸ್‌’ ಖಾತೆಯಲ್ಲಿ ಶನಿವಾರ ಹಂಚಿಕೊಳ್ಳಾಗಿತ್ತು.

Join Whatsapp