Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ: ಯತ್ನಾಳ್

ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ: ಯತ್ನಾಳ್

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.

ವಿಧಾನಸಭೆ ಕಲಾಪ ಶೂನ್ಯವೇಳೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಟೆಂಡರ್/ಕಾಮಗಾರಿ ಬಾಕಿ ಬಿಲ್ ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮೀಷನ್ ಆರೋಪದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಸರ್ಕಾರ ಕಾಮಗಾರಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರರಿಗೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಿಲ್ಲ, ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಅನ್ಯ ರಾಜ್ಯಗಳ ಗುತ್ತಿಗೆದಾರರಿಗೆ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡಿದೆ. ಈ ಮೂಲಕ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದೊಡ್ಡ ಹಗರಣ ನಡೆದಿದೆ, ಸರ್ಕಾರ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಯತ್ನಾಳ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Join Whatsapp
Exit mobile version