Home ಟಾಪ್ ಸುದ್ದಿಗಳು ಜಮ್ಮು – ಕಾಶ್ಮೀರದ ರಾಜ್ಯ ಸ್ಥಾನಮಾನ ಪುನಃ ಸ್ಥಾಪಿಸಲು ಬದ್ಧ: ರಾಹುಲ್ ಗಾಂಧಿ

ಜಮ್ಮು – ಕಾಶ್ಮೀರದ ರಾಜ್ಯ ಸ್ಥಾನಮಾನ ಪುನಃ ಸ್ಥಾಪಿಸಲು ಬದ್ಧ: ರಾಹುಲ್ ಗಾಂಧಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಆದಷ್ಟು ಶೀಘ್ರದಲ್ಲೇ ಪುನಃ ಸ್ಥಾಪಿಸುವ ದೃಢವಾದ ಬದ್ಧತೆಯನ್ನು ಕಾಂಗ್ರೆಸ್ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಹೊಂದಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಮ್ಮ ಪ್ರಾಶಸ್ತ್ಯವೇನು ಎಂಬುದು ಸ್ಪಷ್ಟವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರಳಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡಲಿದ್ದೇವೆ’ ಎಂದು ಹೇಳಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ಸ್ಥಾನಮಾನ ಬದಲಾವಣೆಯಂತಹ ಪ್ರಸಂಗ ಹಿಂದೆಂದೂ ಆಗಿರಲಿಲ್ಲ ಎಂದ ರಾಹುಲ್‌, ‘ಸ್ವಾತಂತ್ರ್ಯಾನಂತರ ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೆಳದರ್ಜೆಗೆ ಇಳಿಸಿದ್ದು ಇದೇ ಮೊದಲು’ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

Join Whatsapp
Exit mobile version