Home ಟಾಪ್ ಸುದ್ದಿಗಳು ಸಿ.ಎಫ್. ಐ. ಪ್ರತಿಭಟನೆ ಬಗ್ಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಮಿತಿ ಪರಾಮರ್ಶೆ: ಬಸವರಾಜ್ ಬೊಮ್ಮಾಯಿ

ಸಿ.ಎಫ್. ಐ. ಪ್ರತಿಭಟನೆ ಬಗ್ಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಮಿತಿ ಪರಾಮರ್ಶೆ: ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಬೆಲೆಯೇರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.


ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.


ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.

Join Whatsapp
Exit mobile version