ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿ ಶೀಘ್ರ ರಚನೆ ಸಾಧ್ಯತೆ

Prasthutha|

ಗಾಂಧಿನಗರ: ಗುಜರಾತ್ ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಏಕರೂಪ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸುವ ಮೌಲ್ಯಮಾಪನಕ್ಕಾಗಿ ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವ ಸಾಧ್ಯತೆ ಇದೆ.

ಈ ಹಿಂದೆ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ತಮ್ಮ ನಿರ್ಧಾರವನ್ನು ಘೋಷಿಸಿದ್ದವು.

- Advertisement -

ಏಕರೂಪ ನಾಗರಿಕ ಸಂಹಿತೆಯು ಭಾರತದಲ್ಲಿ ನಾಗರಿಕರ ವೈಯಕ್ತಿಕ ಕಾನೂನುಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಸ್ತಾಪವಾಗಿದೆ. ಅದು ಎಲ್ಲಾ ನಾಗರಿಕರಿಗೆ ಅವರ ಧರ್ಮ, ಲಿಂಗ ಮತ್ತು ಲೈಂಗಿಕ ದೃಷ್ಟಿಕೋನವನ್ನು ಲೆಕ್ಕಿಸದೆ ಸಮಾನವಾಗಿ ಅನ್ವಯಿಸುತ್ತದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ಇದನ್ನು “ಅಸಾಂವಿಧಾನಿಕ ಮತ್ತು ಅಲ್ಪಸಂಖ್ಯಾತರ ವಿರೋಧಿ ಕ್ರಮ” ಎಂದು ಕರೆದಿದಿದೆ.  ಈ ಕಾನೂನನ್ನು ತರುವ ಚರ್ಚೆ ಮೂಲಕ ಉತ್ತರಾಖಂಡ ಉತ್ತರ ಪ್ರದೇಶ ಮತ್ತು ಕೇಂದ್ರ ಸರ್ಕಾರಗಳು ಹಣದುಬ್ಬರ, ಆರ್ಥಿಕತೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ಸಮಸ್ಯೆಯಿಂದ  ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ  ಎಂದು ಎಐಎಂಪಿಎಲ್ ಬಿ ಹೇಳಿದೆ.

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಯಾವುದೇ ಕಾನೂನನ್ನು ರಚಿಸಲು ಅಥವಾ ಜಾರಿಗೊಳಿಸಲು ಸಂಸತ್ತಿಗೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಕೇಂದ್ರವು ಈ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು.

ಶಾಸನವನ್ನು ಜಾರಿಗೆ ತರುವುದು ಅಥವಾ ಜಾರಿಗೊಳಿಸದಿರುವುದು ಶಾಸಕಾಂಗಕ್ಕೆ ಬಿಟ್ಟಿದ್ದು ಎಂದು ಸಚಿವಾಲಯವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಭಾರತೀಯ ಜನತಾ ಪಕ್ಷದ 2019 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಯುಸಿಸಿಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.

Join Whatsapp