ಬಾದಾಮಿಯಲ್ಲಿ ಕೋಮು ಘರ್ಷಣೆ: ನಿಷೇಧಾಜ್ಞೆ ಜಾರಿ, ಶಾಲಾ ಕಾಲೇಜುಗಳಿಗೆ ರಜೆ

Prasthutha|

ಬಾದಾಮಿ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಕೋಮು ಘರ್ಷಣೆ ಸಂಭವಿಸಿ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ಎರಡು ಕೋಮುಗಳ ನಡುವೆ ಘರ್ಷಣೆ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರಿಗೆ ಚಾಕು ಇರಿತವಾಗಿದ್ದು ಒಟ್ಟು ನಾಲ್ಕು ಜನ ಗಾಯಗೊಂಡಿದ್ದಾರೆ. ಚಾಕು ಇರಿತಕ್ಕೆ ಒಳಗಾದವರನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಅರುಣ ಹಾಗೂ ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ಯಮನೂರ್ ಎಂಬವರು ಕೂಡ ಗಾಯಗೂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಒಂದು ಗುಂಪಿನ ಮೂರು ಜನ ಗಾಯಾಳುಗಳು ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದು ಗುಂಪಿನ ಗಾಯಾಳು ಕೆರೂರು ಪಟ್ಟಣದ ನಿವಾಸಿ ಬಂದೇನವಾಜ್ ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಕು ಇರಿತದ ಬೆನ್ನಲ್ಲೇ ಹಲವು ಮುಸ್ಲಿಮರ ಅಂಗಡಿ, ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೆರೂರು ಪಟ್ಟಣಕ್ಕೆ ಬಾಗಲಕೋಟೆಯ ಎಸ್ಪಿ ಜಯಪ್ರಕಾಶ್ ಅವರು ಭೇಟಿ ನೀಡಿದ್ದಾರೆ ಪರಿಶೀಲನೆ ನಡೆಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜುಲೈ ಏಳರಂದು ಕೆರೂರು ಪಟ್ಟಣದಲ್ಲಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಯನ್ನು ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೆರೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Join Whatsapp