ತಮಿಳುನಾಡು ಸರ್ಕಾರದಿಂದ ಆಲ್ಟ್ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಕೋಮು ಸೌಹಾರ್ದ ಪ್ರಶಸ್ತಿ ಪ್ರದಾನ

Prasthutha|

ಚೆನ್ನೈ: ತಮಿಳುನಾಡು ಸರ್ಕಾರ 75ನೇ ಗಣರಾಜ್ಯೋತ್ಸವದಲ್ಲಿ ಆಲ್ಟ್ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್ ಜುಬೇರ್ ಅವರಿಗೆ 2024ನೇ ಸಾಲಿನ ‘ಕೊಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿ’ ನೀಡಿ ಗೌರವಿಸಿದೆ.

- Advertisement -


ಮಾರ್ಚ್ 2023ರಲ್ಲಿ ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂಬ ಸುಳ್ಳು ಸುದ್ದಿಯೊಂದು ಹಬ್ಬಿತ್ತು. ಆದರೆ ಇದೊಂದು ಸುಳ್ಳು ಸುದ್ದಿ ಎಂದು ಜುಬೈರ್ ಅವರು ಸತ್ಯ ಬಯಲು ಮಾಡಿದ್ದರು. ಈ ಮೂಲಕ ಹಿಂಸಾಚಾರವನ್ನು ತಡೆಗಟ್ಟುವಲ್ಲಿ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕೋಮು ಸೌಹಾರ್ದ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಿದರು.

Join Whatsapp
Exit mobile version