ಕೋಮು ಗಲಭೆ, ಪ್ರಚೋದನೆಯ ಮೂಲಕ ಮತ ಪಡೆಯಲು ಸಾಧ್ಯವಿಲ್ಲ: ಜಿ.ಟಿ. ದೇವೇಗೌಡ

Prasthutha|

ಹೊಸಪೇಟೆ: ಅಲ್ಪಸಂಖ್ಯಾತ ಮುಸ್ಲಿಮರು ಪರೀಕ್ಷೆಗಳಿಗೆ ಹಾಜರಾಗುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ನಾಯಕರು ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಪ್ರಚೋದನಕಾರಿ ಹೇಳಿಕೆ ನೀಡುವುದನ್ನು ತಕ್ಷಣ ನಿಲ್ಲಿಸಲಿ. ಇದರಿಂದ ಮತವನ್ನು ಪಡೆಯಲು ಸಾಧ್ಯವಿಲ್ಲ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

- Advertisement -

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಭಯ ಪಕ್ಷಗಳ ನಾಯಕರ ಪ್ರಚೋದನಾಕಾರಿ ಹೇಳಿಕೆಗಳಿಂದ ಜನ ಬೇಸತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಒಟ್ಟಾಗಿ ದೇಶ, ರಾಜ್ಯ ಮತ್ತು ಸಮಾಜದ ರಕ್ಷಣೆಗೆ ಒತ್ತು ನೀಡುವ ಹೇಳಿಕೆಗಳನ್ನು ನೀಡುವಂತಾಗಬೇಕು. ಹಿಂದೂ – ಮುಸ್ಲಿಮರು ಹಳ್ಳಿಗಳಲ್ಲಿ ಸೌಹಾರ್ದತೆಯಿಂದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ವಿನಾಕಾರಣ ತಮ್ಮ ರಾಜಕೀಯ ಬೇಳೆ ಬೇಯಿಸಲು ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.



Join Whatsapp