ಬೆಂಗಳೂರು: ರಾಜ್ಯದಲ್ಲಿ ಪ್ರಭಾವಿ ದಲಿತ ನಾಯಕರಿದ್ದರೂ ಸಮುದಾಯಕ್ಕೆ ಸಿಎಂ ಆಗುವ ಅವಕಾಶ ಸಿಗಲಿಲ್ಲವೆಂದು ಸಚಿವ ಡಾ. ಹೆಚ್ ಸಿ ಮಹದೇವಪ್ಪ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯಮಟ್ಟದ ಎಸ್ಸಿ, ಎಸ್ಟಿ ನೌಕರರ ಸಮಾವೇಶದಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ, ನಾನು ಪಾಲಿಸಿ ಮೇಕಿಂಗ್ ಸ್ಥಾನದಲ್ಲಿಲ್ಲ ಎಂದು ನೊಂದು ನುಡಿದರು.
ನೀವು ನಾಯಕರನ್ನು ಫಾಲೋ ಮಾಡುತ್ತಿಲ್ಲ. ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡರು ಯಾಕೆ ಸಿಎಂ ಆದರು? ರಾಜ್ಯದಲ್ಲಿ ಒಗ್ಗಟಾಗಿ ಪಕ್ಷಕ್ಕೆ ಮತ ನೀಡಿದ ಬಳಿಕವೂ ಪುನಃ ಸಿಎಂ ಸ್ಥಾನ ಕೊಡಿ ಎಂದು ಕೇಳುವ ಪರಿಸ್ಥಿತಿ ನಮ್ಮದಾಗಿದೆ. ಮತ ನಮ್ಮದಿದೆ, ನಾಯಕತ್ವ ಇನ್ಯಾರ ಬಳಿಯೋ ಇದೆ. ಇದಕ್ಕೆ ನಾವು ನಮ್ಮ ನಾಯಕತ್ವ ಬೆಳೆಸದಿರುವುದೇ ಕಾರಣ ಎಂದು ಬೇಸರದಿಂದ ಹೇಳಿದರು.