Home ಟಾಪ್ ಸುದ್ದಿಗಳು ಚೈತ್ರ ಕುಂದಾಪುರಳ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ದ.ಕ.ಜಿಲ್ಲಾ ಸಮಿತಿ ವತಿಯಿಂದ ಪೋಲಿಸ್ ಆಯುಕ್ತರಿಗೆ...

ಚೈತ್ರ ಕುಂದಾಪುರಳ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ದ.ಕ.ಜಿಲ್ಲಾ ಸಮಿತಿ ವತಿಯಿಂದ ಪೋಲಿಸ್ ಆಯುಕ್ತರಿಗೆ ದೂರು

ಮಂಗಳೂರು : ಸುರತ್ಕಲ್ ನಲ್ಲಿ ನಡೆದ ವಿಶ್ವಹಿಂದು ಪರಿಷತ್ ಭಜರಂಗ ದಳದ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಎಂಬಾಕೆ ಮುಸ್ಲಿಂ ಸಮುದಾಯವನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಂತ ತುಚ್ಚವಾದ ಭಾಷೆಯಲ್ಲಿ ನಿಂದಿಸಿ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕದಡಲು ಯತ್ನಿಸಿದ್ದು, ಈಕೆಯ ವಿರುದ್ಧ ಮತ್ತು ಸಭೆಯ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ.ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಿಮ್ ಸದಸ್ಯರುಗಳಾದ ಕೈರುನ್ನೀಸ ಬೆಂಗರೆ ಸಮೀನ ಬೆಂಗರೆ ಉಪಸ್ಥಿತರಿದ್ದರು

Join Whatsapp
Exit mobile version