ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ವೆಸಗಿದ ಪೊಲೀಸರ ವಿರುದ್ಧ ದೂರು: NSUI

Prasthutha|

ಬೆಂಗಳೂರು: NEP ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ವೆಸಗಿದ ಪೊಲೀಸರ ವಿರುದ್ಧ ದೂರು ದಾಖಲಿಸುತ್ತೇವೆ ಎಂದು NSUI ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡಿರುವುದು ಖಂಡನೀಯ. ಎಲ್ಲಾ ವಿದ್ಯಾರ್ಥಿಗಳು ಸೇರಿ NEPಯನ್ನು ವಿರೋಧಿಸುತ್ತಿದ್ದೇವೆ ಹಾಗೂ ಕ್ಯಾಂಪಸ್ ಫ್ರಂಟ್ ಜೊತೆಗೆ ನಾವು ನಿಲ್ಲುತ್ತೇವೆ ಎಂದು ಹೇಳಿದರು.

- Advertisement -

ಪೊಲೀಸರು ವಿದ್ಯಾರ್ಥಿಗಳನ್ನು ಗೂಂಡಾಗಳಂತೆ ನಡೆಸಿಕೊಂಡಿದ್ದಾರೆ. NEP ವಿರುದ್ಧದ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. NEP ಯು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ. ಅದನ್ನು ತಿರಸ್ಕರಿಸುತ್ತೇವೆ. ಸಾಕಷ್ಟು ಲೋಪ ದೋಷಗಳಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವುದೇ ಚರ್ಚೆ ಮಾಡದೆ ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಈ ಶಿಕ್ಷಣ ನೀತಿಯು ಮಾರಕವಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -