ಸಿದ್ದರಾಮಯ್ಯ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ SC ಮೋರ್ಚಾ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಮತ್ತು ಅಶ್ವತ್ಥ್ ನಾರಾಯಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಸಿದ್ಧರಾಮಯ್ಯ ಹೇಳಿಕೆ ನೀಡಿರುವ ವಿಚಾರ ಮತ್ತು ದೇಶದಲ್ಲಿ ಸಂವಿಧಾನ ರಚಿಸಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಮಾಜಿ ಅನಿಲ್ ಲಾಡ್ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯ ವಿಚಾರವಾಗಿ ಬಿಜೆಪಿ ನಾಯಕರು ಸಿದ್ಧರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

Join Whatsapp