ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ದ ಕಮಿಷನರ್’ಗೆ ದೂರು

Prasthutha|

ಮಂಗಳೂರು: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಗೆ ದೂರು ನೀಡಲಾಗಿದೆ.

- Advertisement -


ಎಂಎಲ್ ಸಿ ಐವನ್ ಡಿಸೋಜಾ ನೇತೃತ್ವದ ನಿಯೋಗ, ಇಂದು(ಜು.09) ಕಮಿಷನರ್ ಅವರನ್ನು ಭೇಟಿಯಾಗಿ ಭರತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಲು ಒತ್ತಾಯಿಸಿದರು.


ಮಂಗಳೂರಿನ ಕಾವೂರಿನಲ್ಲಿ ನಿನ್ನೆ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಭರತ್ ಶೆಟ್ಟಿ, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ರಾಹುಲ್ ಗಾಂಧಿ ಶಿವನ ಫೋಟೋ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲ ಎಂದಿದ್ದರು. ಈ ಹಿನ್ನಲೆ ಐವನ್ ಡಿಸೋಜಾ ನೇತೃತ್ವದ ನಿಯೋಗ ಭರತ್ ಶೆಟ್ಟಿ ಅವರನ್ನು ಬಂಧಿಸಲು ಕಮಿಷನರ್ಗೆ ದೂರು ನೀಡಿದೆ.

Join Whatsapp