ತಿರುವನಂತಪುರಂ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟರ್ ಶ್ರೀಶಾಂತ್ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಸರೀಶ್ ಗೋಪಾಲನ್ ಎಂಬುವರು ನೀಡಿದ ದೂರಿನ ಮೇರೆಗೆ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ 2019ರಲ್ಲಿ ಸುಮಾರು 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಸರೀಶ್ ಗೋಪಾಲನ್ ದೂರಿನಲ್ಲಿ ತಿಳಿಸಿದ್ದಾರೆ.