Home ಟಾಪ್ ಸುದ್ದಿಗಳು ರಾಷ್ಟ್ರ ಧ್ವಜಕ್ಕೆ ಅಪಮಾನ: ಸಿಟಿ ರವಿ ವಿರುದ್ಧ ದೂರು

ರಾಷ್ಟ್ರ ಧ್ವಜಕ್ಕೆ ಅಪಮಾನ: ಸಿಟಿ ರವಿ ವಿರುದ್ಧ ದೂರು

ಮಂಡ್ಯ: ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ದೂರು ನೀಡಿದ್ದಾರೆ.


ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆಂದು ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಅವರು ಸಿಟಿ ರವಿ ವಿರುದ್ಧ ಮಂಡ್ಯ ಎಸ್ಪಿಗೆ ದೂರು ನೀಡಿದ್ದಾರೆ.


ಸುದ್ದಿ ಸಂಸ್ಥೆಯೊಂದಕ್ಕೆ ಹಿಂದಿ ಭಾಷೆಯಲ್ಲಿ ನೀಡಿದ್ದ ಹೇಳಿಕೆಯಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಹನುಮ ಧ್ವಜ ಇಳಿಸಿ ತಾಲಿಬಾನ್ ಧ್ವಜ ಹಾರಿಸಲಾಗಿದೆ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆಂದು ಮಂಡ್ಯ ಎಸ್ಪಿ ಯತೀತ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.

Join Whatsapp
Exit mobile version