Home ಟಾಪ್ ಸುದ್ದಿಗಳು ಹುಲಿ ಉಗುರು: ನಟ ದರ್ಶನ್, ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ಹುಲಿ ಉಗುರು: ನಟ ದರ್ಶನ್, ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಬಳಿಕ ಇನ್ನುಳಿದ ಸೆಲೆಬ್ರಿಟಿ ಮೇಲೂ ಕಣ್ಣು ಬಿದ್ದಿದೆ. ನಟ ದರ್ಶನ್, ವಿನಯ್ ಗುರೂಜಿ ವಿರುದ್ಧ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದರಿಂದ ದರ್ಶನ್ ಹಾಗೂ ವಿನಯ್ ಗುರೂಜಿಗೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

‘ದರ್ಶನ್ ಬಂಗಾರದ ಚೈನ್ ಹಾಕಿದ್ದಾರೆ. ಅದರಲ್ಲಿ ಹುಲಿಯ ಉಗುರು ಇದೆ. ಅವರಿಂದ ಕಾನೂನಿನ ಉಲ್ಲಂಘನೆ ಆಗಿದೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ. ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು ಸಂತೋಷ ಅವರನ್ನು ಬಂಧಿಸಿದ್ದೀರಿ. ಅದೇ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ ಎಂದು ದೂರು ನೀಡಿದ್ದಾರೆ.

Join Whatsapp
Exit mobile version