ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಮಾಜಿ ಸಚಿವ ಎಚ್.ಎಂ.ರೇವಣ್ಣ ವಿರುದ್ಧ ದೂರು ದಾಖಲು

- Advertisement -

- Advertisement -

ಬೆಂಗಳೂರು: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಎಚ್.ಎಂ. ರೇವಣ್ಣ ಅವರ ವಿರುದ್ಧ ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ಸದ್ಯ ರೇವಣ್ಣ ಅವರು ಕರ್ನಾಟಕ ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ.

- Advertisement -

ರೇವಣ್ಣ ನಂದಿನಿ ಅವರನ್ನು ತಳ್ಳುತ್ತಿರುವ ವೀಡಿಯೊ ಸಾಕ್ಷ್ಯವನ್ನು ನಂದಿನಿ ಪೊಲೀಸರಿಗೆ ಸಲ್ಲಿಸಿದ್ದಾರೆ. ವಿಡಿಯೋ ತುಣುಕಿನಲ್ಲಿ, ನಂದಿನಿ ರೇವಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಈ ವಿಷಯವನ್ನು ವರದಿ ಮಾಡಿ ವೀಡಿಯೊವನ್ನು ಕಳುಹಿಸುವುದಾಗಿ ಹೇಳುತ್ತಿರುವುದು ಕಂಡುಬರುತ್ತಿದೆ. ಅಲ್ಲಿಂದ ಹೊರಹೋಗುವಂತೆ ಹೇಳುತ್ತಿರುವುದು ಕಂಡುಬರುತ್ತದೆ.

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ಆ ಮಹಿಳೆ ನನಗೆ ಕಿರಿಕಿರಿ ಮಾಡಿಕೊಂಡು ಗಲಾಟೆ ಮಾಡುತ್ತಿದ್ದರು. ಪದೇ ಪದೇ ರಾಹುಲ್ ಗಾಂಧಿ ಹೆಸರು ಹೇಳುತ್ತಿದ್ದಳು. ಕೊಲೆ ಮಾಡಲು ಬಂದಿದ್ದರು, ಹೊಡೆದರು ಅನ್ನೋದು ಸರಿಯಲ್ಲ. ವಿಡಿಯೋ ಮಾಡಬೇಡ ಅಂತಾ ಮೊಬೈಲ್​ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಅಧಿಕಾರಿಯನ್ನು ವರ್ಗಾವಣೆ ಮಾಡಿಸುವುದಾಗಿ ಮಹಿಳೆ ಫೋನ್​ಪೇ ಮೂಲಕ 1 ಲಕ್ಷ ರೂ. ದುಡ್ಡು ಪಡೆದಿದ್ದಾಳೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದರು. ಅಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಆಕೆಗೆ ಹೇಳಿದ್ದೆ ಎಂದು ರೇವಣ್ಣ ತಿಳಿಸಿದ್ದಾರೆ.

ಆದರೆ ಆಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ನಾನು ಮಹಿಳಾ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಮತ್ತು ಅನುಚಿತ ಭಾಷೆಯನ್ನು ಬಳಸಿದ್ದೇನೆ ಎಂದು ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ. ನನ್ನಿಂದಾಗಿ ತನಗೆ ಜೀವ ಭಯವಿದೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಹಾನಿ ಮಾಡುವುದರಿಂದ ನನಗೇನು ಲಾಭ? ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ, ನಾನು ಎಂದಿಗೂ ಅಂತಹ ಕೃತ್ಯಗಳಲ್ಲಿ ತೊಡಗಿಲ್ಲ ಎಂದು ರೇವಣ್ಣ ಪ್ರತಿಪಾದಿಸಿದರು.

- Advertisement -


Must Read

Related Articles