ಗಣಪತಿ ಶೋಭಯಾತ್ರೆ ವೇಳೆ ಗಾಂಧಿ ಹಂತಕ ಗೋಡ್ಸೆ ಚಿತ್ರ ಪ್ರದರ್ಶನ: ದೂರು ದಾಖಲು

Prasthutha|

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗಾಂಧಿ ಹಂತಕ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

- Advertisement -


ಅಕ್ಟೋಬರ್ 8ರಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ ಮಾಡಲಾಗಿತ್ತು. ಇದು ಆಕ್ರೋಶಕ್ಕೆ ಕಾರಣವಾಗಿತ್ತು.


ಅದರಂತೆ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ದೂರು ನೀಡಿದ್ದು, ಈ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 505/1(C), 505/1(B) ಅಡಿಯಲ್ಲಿ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.