ಇನ್ಸ್‌‌ಪೆಕ್ಟರ್ ನಂದೀಶ್ ಸಾವು: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

Prasthutha|

ಬೆಂಗಳೂರು: ಅಮಾನತುಗೊಂಡಿದ್ದ ಇನ್ಸ್‌‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ 7 ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಕೆ.ಆರ್. ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -


ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ, ಭೈರತಿ ಬಸವರಾಜ್ ಸಂಬಂಧಿಗಳಾದ ಚಂದ್ರು ಹಾಗೂ ಗಣೇಶ್ ಇನ್ಸ್‌‌ಪೆಕ್ಟರ್ ನಂದೀಶ್ ಸಾವಿಗೆ ಕಾರಣ ಎಂದು ಆರೋಪಿಸಿ ಅವರ ವಿರುದ್ಧ ದೂರು ನೀಡಿದ್ದಾರೆ.


ಪ್ರಧಾನವಾಗಿ ಭೈರತಿ ಬಸವರಾಜ್ ಅವರ ಸಂಬಂಧಿಗಳ ಕಿರುಕುಳವೇ ನಂದೀಶ್ ಹೃದಯಾಘಾತಕ್ಕೆ ಕಾರಣ. ಜತೆಗೆ ಪೋಸ್ಟಿಂಗ್ ಗಾಗಿ ಭೈರತಿ ಬಸವರಾಜ್ ಅವರಿಗೆ 50 ಲಕ್ಷ ರೂ. ಹಾಗೂ ಗೃಹ ಸಚಿವರಿಗೆ 20 ಲಕ್ಷ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Join Whatsapp