Home ಟಾಪ್ ಸುದ್ದಿಗಳು 50 ಕೋಟಿ ನೀಡುವಂತೆ ಬೆದರಿಕೆ: ಕುಮಾರಸ್ವಾಮಿ ವಿರುದ್ಧ ದೂರು ದಾಖಲು

50 ಕೋಟಿ ನೀಡುವಂತೆ ಬೆದರಿಕೆ: ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿರುವ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ತಾತಾ ಎಂಬುವರು ಇಬ್ಬರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ತಾತಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

Join Whatsapp
Exit mobile version