ಮಂಗಳೂರು: ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಲಾಗಿದೆ.
ಸಂತು ಬೆದ್ರ ಎಂಬಾತನ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಜಯಂತಿ ಬಿ ಶೆಟ್ಟಿ, ಕಾರ್ಯದರ್ಶಿ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮಿಳಾ ಶಕ್ತಿನಗರ, ಆಶಾ ಬೋಳೂರು, ಯೋಗಿತಾ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.