ಅವಹೇಳನಾಕಾರಿ ಹೇಳಿಕೆ: ಸೂಲೆಬೆಲೆ ವಿರುದ್ಧ ದೂರು ದಾಖಲು

Prasthutha|

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಸೂಲೆಬೆಲೆ ವಿರುದ್ಧ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

- Advertisement -


ಚಕ್ರವರ್ತಿ ಸೂಲೆಬೆಲೆ ಇತ್ತೀಚಿಗೆ ಜಣಗಣಮನ ಅಭಿಯಾನ ಹಿನ್ನೆಲೆ ಕಾರವಾರದ ಕಡವಾಡಕ್ಕೆ ಬಂದಿದ್ದರು.ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಚಕ್ರವರ್ತಿ ಸೂಲೆಬೆಲೆ , ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ಬದುಕುವುದು ಕಷ್ಟ. ಮುಸ್ಲಿಮರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಯ ಹಸ್ತವಿದೆ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಕರಣ ಸಂಬಂಧಿಸಿ ಹಿಂದು-ಮುಸ್ಲಿಂ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಹೇಳಿಕೆ ನೀಡಿದ್ದಾರೆಂಬ ಆರೋಪ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.