ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ: ಸೂಲಿಬೆಲೆ ವಿರುದ್ಧ ದೂರು ದಾಖಲು

Prasthutha|

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಮಾಡಿದ ಆರೋಪದ ಮೇಲೆ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

- Advertisement -

ಕಲಬುರಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್​ ಅವರು ಕಲಬುರಗಿ ಪೊಲೀಸ್ ಆಯುಕ್ತ ಆರ್​.ಚೇತನ್​ಗೆ ದೂರು ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

- Advertisement -

ರಾಯಚೂರಿನ ಶಿರವಾದಲ್ಲಿ ನಡೆದ ‘ನಮೋ ಭಾರತ’ ಎಂಬ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಖರ್ಗೆ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

Join Whatsapp