Home ಟಾಪ್ ಸುದ್ದಿಗಳು ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ: ಸೂಲಿಬೆಲೆ ವಿರುದ್ಧ ದೂರು ದಾಖಲು

ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ: ಸೂಲಿಬೆಲೆ ವಿರುದ್ಧ ದೂರು ದಾಖಲು

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಮಾಡಿದ ಆರೋಪದ ಮೇಲೆ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

ಕಲಬುರಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್​ ಅವರು ಕಲಬುರಗಿ ಪೊಲೀಸ್ ಆಯುಕ್ತ ಆರ್​.ಚೇತನ್​ಗೆ ದೂರು ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಾಯಚೂರಿನ ಶಿರವಾದಲ್ಲಿ ನಡೆದ ‘ನಮೋ ಭಾರತ’ ಎಂಬ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಖರ್ಗೆ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

Join Whatsapp
Exit mobile version