ಮೆಕ್ಯಾನಿಕ್’ಗೆ ಅಪಮಾನ: ಝೀ ವಾಹಿನಿ ವಿರುದ್ಧ ದೂರು ದಾಖಲು

Prasthutha|

ಬೆಂಗಳೂರು: ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ, ಅಪಮಾನಿಸಿರುವ ʻಮಹಾನಟಿʼ ಎಂಬ ರಿಯಾಲಿಟಿ ಶೋ ನಡೆಸುವ ಜೀ ವಾಹಿನಿ ಮತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ, ನಟಿಯರ ವಿರುದ್ಧ ಆಕ್ರೋಶಗೊಂಡಿರುವ ಮೆಕ್ಯಾನಿಕ್ ವೃತ್ತಿ ನಡೆಸುವವರು ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ನಿರೂಪಕಿ ಅನುಶ್ರೀ, ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ಝೀ ವಾಹಿನಿ ಸೇರಿ ಮತ್ತಿತರರ ವಿರುದ್ಧ ದೂರು ದಾಖಲಾಗಿದೆ. ದೂರಿನಲ್ಲಿ ರಿಯಾಲಿಟಿ ಶೋವೊಂದರಲ್ಲಿ ಸ್ಪರ್ಧಿ ಗಗನ ದೃಶ್ಯವೊಂದರ ನಟನೆಯಲ್ಲಿ ಮೆಕ್ಯಾನಿಕ್ ರನ್ನು ಮದುವೆಯಾದರೆ ಗ್ರೀಸ್ ತಿಂದುಕೊಂಡು ಬದುಕಲಾಗದು ಎಂಬ ಮಾತುಗಳನ್ನು ಆಡುತ್ತಾಳೆ. ಈ ಮಾತಿನಿಂದ ವೃತ್ತಿಪರ ಮೆಕ್ಯಾನಿಕ್ ಸಮುದಾಯಕ್ಕೆ ನೋವಾಗಿದೆ ಎಂದು ಹೇಳಿದ್ದಾರೆ. ಶ್ರಮಿಕವರ್ಗದ ದುಡಿಮೆಯ ಬಗ್ಗೆ ವೃತ್ತಿಯ ಬಗ್ಗೆ ಹೀಗೆ ತಿರಸ್ಕಾರದ ಕುಹಕದ ಮತ್ತು ನಿಂದನಾತ್ಮಕ ಮಾತುಗಳನ್ನು ಆಡಿರುವ ಸ್ಪರ್ಧಿ ಹಾಗೂ ಆಕೆಯ ಮಾತುಗಳಿಗೆ ಉತ್ತೇಜನ ನೀಡಿದ ನಿರೂಪಕಿ, ನಿರ್ದೇಶಕರು, ನಿರ್ಮಾಪಕರು ತೀರ್ಪುಗಾರರು ಹಾಗೂ ವಾಹಿನಿಯ ವಿರುದ್ಧ ದೂರು ದಾಖಲಿಸಿದ್ದಾರೆ.



Join Whatsapp