ಚಿತ್ರದುರ್ಗ: ಹಣ ದುರುಪಯೋಗ ಮಾಡಿದ ಆರೋಪ ಸಂಬಂಧ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾಧಿಕಾರಿಯವರಿಗೆ ದೂರು ನೀಡಲಾಗಿದೆ.
ಟೆಂಡರ್ ಕರೆಯದೆ 4 ಕೋಟಿ ಮೌಲ್ಯದ ಕಬ್ಬಿಣ, ಸಿಮೆಂಟ್ ಖರೀದಿ ಹಾಗೂ ನಿಯಮ ಮೀರಿ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಆರೋಪಗಳ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ. ಈ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಹೆಚ್.ಏಕಾಂತಯ್ಯ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.