ಗರ್ಭಿಣಿ ಮಹಿಳೆಯನ್ನು ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣ; ತನಿಖೆಗೆ ಒತ್ತಾಯಿಸಿ ಡಿಸಿ, ಕಮಿಷನರ್ ಗೆ ದೂರು

Prasthutha|

ಗರ್ಭಿಣಿ ಮಹಿಳೆಯನ್ನು ಅಮಾನವೀಯವಾಗಿ ನಡೆಸಿಕೊಂಡ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂತ್ರಸ್ತ ಕುಟುಂಬದ ಸದಸ್ಯರು ಶುಕ್ರವಾರ ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ನಿಯೋಗದೊಂದಿಗೆ ಜಿಲ್ಲಾಧಿಕಾರಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.

- Advertisement -

ಖತೀಜಾ ಜಾಸ್ಮಿನ್ ಎಂಬ ಗರ್ಭಿಣಿ ಮಹಿಳೆಯನ್ನು ಡಾಕ್ಟರ್ ಪ್ರಿಯಾ ಬಳ್ಳಾಲ್, ಡಾ ಜಯಪ್ರಕಾಶ್, ಡಾಕ್ಟರ್ ಮುರಲೀಧರ್ ಹಾಗೂ ಇತರ ಕೆಲವು ವೈದ್ಯರು ಹಾಗೂ ಆಸ್ಪತ್ರೆಯವರು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ರಾತ್ರಿ ಇಡೀ ಅಲೆದಾಡಿಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ. ಈ ಬಗ್ಗೆ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp