ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
30 ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರು ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಈ 1.39 ಎಕರೆ ಜಮೀನನ್ನು ಮಾರಪ್ಪ ಎಂಬ ಹೆಸರಿನ ವ್ಯಕ್ತಿಗೆ ಡಿನೋಟಿಫೈ ಮಾಡುವಂತೆ ಕೋರುತ್ತಾರೆ. ಆದರೆ, ಮಾರಪ್ಪ ಮತ್ತು ಈ ಜಮೀನಿಗೆ ಯಾವುದೇ ಸಂಬಂಧವಿರುದಿಲ್ಲ. ಮಾರಪ್ಪನ ತಂದೆ ಹೆಸರಿನಲ್ಲಿ ಬೇರೊಂದು ಜಾಗದಲ್ಲಿ ಜಮೀನು ಇದೆ.
ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಪ್ಪ ಎಂಬುವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.