ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

Prasthutha|

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿಗೆ ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ಸಂಪೂರ್ಣ ನಿಷೇಧಿಸಿದೆ.

- Advertisement -


ಪ್ಲಾಸ್ಟಿಕ್ ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಒಂದು ವೇಳೆ ಪ್ಲಾಸ್ಟಿಕ್ ವಸ್ತುಗಳು ಸಿಕ್ಕರೆ ಸೀಜ್ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ, ಪ್ರವಾಸಿತಾಣಗಳನ್ನ ರಕ್ಷಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ಕ್ರಮವನ್ನು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.



Join Whatsapp