ಬೆಂಗಳೂರು : ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಡೆದ ಚರ್ಚೆಯ ತೀರ್ಮಾನದಂತೆ ನಾಳೆಯಿಂದ 14 ದಿನಗಳ ಕಾಲ ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ನಾಳೆ ಸಂಜೆಯಿಂದ ಲಾಕ್ ಡೌನ್ ಜಾರಿಯಾಗಲಿದ್ದು,ಸರ್ಕಾರದಿಂದ ಇನ್ನು ಕೆಲವೇ ಗಂಟೆಗಳಲ್ಲಿ ಲಾಕ್ ಡೌನ್ ನ ಅಧಿಕೃತ ಘೋಷಣೆ ಆಗಲಿದೆ ಎನ್ನಲಾಗಿದೆ.
14 ದಿನ ಕಳೆದು ಪರಿಸ್ಥಿತಿ ಅವಲೋಕನ ನಡೆಸಿ ಲಾಕ್ ಡೌನ್ ಮುಂದುವರೆಸುವ ಕುರಿತು ತೀರ್ಮಾನಿಸಲಾಗುತ್ತದೆ ಎಂದು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ.