ರಾಜ್ಯದಲ್ಲಿ ಮೇ 10 ರಿಂದ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್!

Prasthutha|

ಕಠಿಣ ನಿಯಮಗಳೊಂದಿಗೆ ಹೊಸ ಲಾಕ್ ಡೌನ್ ಜಾರಿ !

- Advertisement -

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚುತ್ತಲೇ ಸಾಗುತ್ತಿದ್ದು, ಕರ್ಫ್ಯೂ ಜಾರಿಯಲ್ಲಿದ್ದರೂ ಪರಿಸ್ಥಿತಿ ಹತೋಟಿಗೆ ಬರದ ಹಿನ್ನಲೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಸದ್ಯಕ್ಕೆ ಅಸ್ತಿತ್ವದಲ್ಲಿರುವ ಕರ್ಫ್ಯೂ ನಿಯಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹೊಸ ಮಾರ್ಗಸೂಚಿಗಳನ್ನು ಸರಕಾರ ಬಿಡುಗಡೆಗೊಳಿಸಲಿದೆ. ಆರೋಗ್ಯ ಇಲಾಖೆಯ ಸಲಹೆಯಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಗಾಗಿ ಕರ್ನಾಟಕ ರಾಜ್ಯ 15 ದಿನಗಳ ಸಂಪೂರ್ಣ ಲಾಕ್ ಡೌನ್ ಗೊಳಗಾಗಲಿದೆ.


ಕೋವಿಡ್ ನಿಯಂತ್ರಿಸಲು ಇದೀಗಾಗಲೇ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಲ್ಲಿದ್ದರೂ ದೈನಂದಿನ ಪಾಸಿಟಿವ್ ಪ್ರಕರಣಗಳು ಇಳಿಮುಖಗೊಳ್ಳದ ಕಾರಣ ಆರೋಗ್ಯ ಇಲಾಖೆ ಪರಿಸ್ಥಿತಿಯು ಇನ್ನಷ್ಟು ಬಿಗಡಾಯಿಸಬಹುದು, ಆದುದರಿಂದ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿ ಎಂದು ಆರೋಗ್ಯ ಇಲಾಖೆ, ತಜ್ಞರ ಸಮಿತಿ ಮತ್ತು ಬಿಬಿಎಂಪಿ ಸಂಪೂರ್ಣ ಲಾಕ್ ಡೌನ್ ಗೆ ಮನವಿ ಮಾಡಿತ್ತು. ಅದರಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ಸೇರಿದ್ದು, ಲಾಕ್ ಡೌನ್ ಗೆ ಅನುಮೋದನೆ ದೊರೆತಿದೆ.

- Advertisement -

ಹೊಸ ಲಾಕ್ ಡೌನ್ ನಿಯಮಾವಳಿಗಳಲ್ಲಿ ಉತ್ಪಾದನಾ ವಲಯಗಳು,  ಕಟ್ಟಡ ಕಾಮಗಾರಿ, ಆಟೊ, ಕ್ಯಾಬ್, ಟ್ರೈನ್ ಎಲ್ಲವನ್ನೂ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಇದ್ದ ಸಮಯ ಮಿತಿಗಳನ್ನೂ ತೆಗೆದು ಹಾಕಲಾಗಿದೆ.

Join Whatsapp