ಮೇ 8ರಿಂದ ಕೇರಳ ಸಂಪೂರ್ಣ ಲಾಕ್‌ಡೌನ್!

Prasthutha|

ತಿರುವನಂತಪುರಂ: ಕೋವಿಡ್ ಸೋಂಕು ನಿಯಂತ್ರಣ ಕಳೆದುಕೊಂಡ ಹಿನ್ನೆಲೆಯಲ್ಲಿ ಕೇರಳದಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮೇ 8ರ ಬೆಳಿಗ್ಗೆ 6 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುವುದೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್ ಸೋಂಕಿನ ಸಂಖ್ಯೆಯಲ್ಲಿ ತೀವ್ರ ಹೆಚ್ಚಳದಿಂದಾಗಿ ಮೇ 5 ರಿಂದ 9ರವರೆಗೆ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗಿದೆ. ಆದರೆ ಕೊರೋನಾ ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದಂತೆ ಸಂಪೂರ್ಣ ಲಾಕ್‌ಡೌನ್ ವಿಧಿಸಲು ಸರ್ಕಾರ ನಿರ್ಧರಿಸಿದೆ.

- Advertisement -

ನಿನ್ನೆ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 40,000 ದಾಟಿತ್ತು. ರಾಜ್ಯವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ನಿನ್ನೆ ಅತಿ ಹೆಚ್ಚು ದೈನಂದಿನ ಹೆಚ್ಚಳ ಕಂಡಿದೆ.

ಕೇರಳದಲ್ಲಿ ನಿನ್ನೆ 41953 ಜನರಿಗೆ ಕೋವಿಡ್ ದೃಢಪಟ್ಟಿದೆ ಎಂದು ವರದಿಯಾಗಿದೆ.

- Advertisement -