ಕೇರಳದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ: ಮತ್ತೆ ವಾರಾಂತ್ಯ ಲಾಕ್ ಡೌನ್ ಜಾರಿ

Prasthutha|

ನವದೆಹಲಿ, ಜು.29: ದೈನಂದಿನ ಕೋವಿಡ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಈ ವಾರದಿಂದ ವಾರಾಂತ್ಯದ ಲಾಕ್‌ ಡೌನ್ ಜಾರಿಯಾಗಿದೆ.
ಕೇಂದ್ರ ಸರ್ಕಾರವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದಿಂದ ಆರು ಮಂದಿಯ ತಂಡವೊಂದನ್ನು ಕೇರಳಕ್ಕೆ ಕಳುಹಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

- Advertisement -


“ಕೇರಳದಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ, ಕೋವಿಡ್ ನಿರ್ವಹಣೆಯಲ್ಲಿ ರಾಜ್ಯದ ನಿರಂತರ ಪ್ರಯತ್ನಗಳಿಗೆ ತಂಡವು ನೆರವಾಗಲಿದೆ” ಎಂದು ಮಾಂಡವಿಯಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ
ಕೋವಿಡ್ ನಿರ್ವಹಣೆಯಲ್ಲಿನ ಅತ್ಯುತ್ತಮ ಪ್ರಯತ್ನಗಳಿಗಾಗಿ ಈ ಹಿಂದೆ ಶ್ಲಾಘಿಸಲ್ಪಟ್ಟ ದಕ್ಷಿಣ ರಾಜ್ಯವಾದ ಕೇರಳದಲ್ಲಿ ಈಗ ದೇಶದ ಶೇಕಡಾ 40 ರಷ್ಟು ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿವೆ.


ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಂತಾನೋತ್ಪತ್ತಿ ದರವು ಈ ತಿಂಗಳ ಆರಂಭದಲ್ಲಿ ಹೊಸ ಅಲೆಯ ಕಳವಳವನ್ನು ಉಂಟುಮಾಡಿದ್ದು, ಇದು ರಾಷ್ಟ್ರೀಯ ಏರಿಕೆಗೆ ಸಹ ಕಾರಣವಾಗಿದೆ.

- Advertisement -


ಕೇರಳದಲ್ಲಿ ಬುಧವಾರ 22,056 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿತ್ತು. ಇದರೊಂದಿಗೆ ಸೋಂಕಿನ ಸಂಖ್ಯೆ 33,27,301 ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಬಲಿಯಾದವರ ಸಂಖ್ಯೆ 16,457 ಕ್ಕೆ ಏರಿಕೆಯಾಗಿದೆ. ಬುಧವಾರ ಒಂದೇ ದಿನ131ಕ್ಕೂ ಹೆಚ್ಚಿನ ಸಾವುಗಳು ಸಂಭವಿಸಿವೆ. 17,761 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೆ 31,60,804 ಮಂದಿ ಚೇತರಿಕೆ ಕಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 1,49,534 ಕ್ಕೆ ತಲುಪಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ

Join Whatsapp