ಕೊರೋನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೂ ಪರಿಹಾರ: ಕೇಂದ್ರ ಸರ್ಕಾರ

Prasthutha|

ಹೊಸದಿಲ್ಲಿ: ಕೊರೋನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬ ದವರಿಗೂ 50 ಸಾವಿರ ರೂ. ಪರಿಹಾರ ಕೊಡಲಾಗುತ್ತದೆ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ.

ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೆ ಇದ್ದ ಸಂದರ್ಭದಲ್ಲಿ ಸೋಂಕಿತರು ಆತ್ಮಹತ್ಯೆ ಮಾಡಿಕೊಂಡಿದ್ದರೆ ಅವುಗಳನ್ನೂ “ಕೊರೊನಾ ಸಾವು’ ಎಂದು ಪರಿಗಣಿಸಿ, ಅವರ ಕುಟುಂಬಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣ ಸಂಸ್ಥೆಯ ಶಿಫಾರಸಿನ ಅನ್ವಯ ಪರಿಹಾರ ನೀಡಲಾಗುತ್ತದೆ ಎಂದು ನ್ಯಾ. ಎಂ.ಆರ್‌.ಶಾ ಮತ್ತು ನ್ಯಾ. ಎ.ಎಸ್‌.ಬೋಪಣ್ಣ ನೇತೃತ್ವದ ನ್ಯಾಯಪೀಠಕ್ಕೆ ಸರಕಾರ ವಿವರಿಸಿದೆ.

- Advertisement -