ಮಂಗಳೂರು: ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತರು.
ತಡೆ ಗೋಡೆ ಕುಸಿದು ಬಿದ್ದ ಮನೆಗೆ ಬಾಲಕ ಶೈಲೇಶ್ ಅತಿಥಿಯಾಗಿ ಬಂದಿದ್ದ ಎಂದು ತಿಳಿದು ಬಂದಿದೆ.